ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಟಿವಿಎಸ್ ಮೋಟಾರ್‌ ತ್ರೈಮಾಸಿಕ ನಿವ್ವಳ ಲಾಭದಲ್ಲಿ ದ್ವಿಗುಣ (TVS Motor | Net profit | Net sales | Second quarter)
Bookmark and Share Feedback Print
 
ದೇಶದ ವಾಹನೋದ್ಯಮ ಕ್ಷೇತ್ರದಲ್ಲಿ ಮೂರನೇ ಸ್ಥಾನದಲ್ಲಿರುವ ಟಿವಿಎಸ್ ಮೋಟಾರ್ ಕಂಪೆನಿ,ಕಡಿಮೆ ವೆಚ್ಚ ಹಾಗೂ ಮಾರಾಟದಲ್ಲಿ ಏರಿಕೆಯಾಗಿದ್ದರಿಂದ ಎರಡನೇ ತ್ರೈಮಾಸಿಕ ಅಂತ್ಯಗೊಂಡಂತೆ ನಿವ್ವಳ ಲಾಭದಲ್ಲಿ ದ್ವಿಗುಣವಾಗಿದೆ

ಜುಲೈನಿಂದ ಸೆಪ್ಟೆಂಬರ್ ತಿಂಗಳ ಅವಧಿಯಲ್ಲಿ 547.8 ಮಿಲಿಯನ್ ರೂಪಾಯಿಗಳ ನಿವ್ವಳ ಲಾಭವಾಗಿದೆ. ಕಳೆದ ವರ್ಷದ ಅವಧಿಯಲ್ಲಿ ನಿವ್ವಳ ಲಾಭ 245.5 ಮಿಲಿಯನ್ ರೂಪಾಯಿಗಳಿಗೆ ತಲುಪಿತ್ತು.

ಕಂಪೆನಿಯ ವಾಹನಗಳ ನಿವ್ವಳ ಮಾರಾಟದಲ್ಲಿ ಏರಿಕೆಯಾಗಿದ್ದು, 11.15 ಬಿಲಿಯನ್ ರೂಪಾಯಿಗಳಿಂದ 15.9 ಬಿಲಿಯನ್ ರೂಪಾಯಿಗಳಿಗೆ ತಲುಪಿದೆ.

ಒಟ್ಟು ದ್ವಿಚಕ್ರವಾಹನಗಳ ಮಾರಾಟದಲ್ಲಿ ಶೇ.32ರಷ್ಟು ಏರಿಕೆಯಾಗಿದ್ದು, ಎರಡನೇ ತ್ರೈಮಾಸಿಕ ಅವಧಿಯಲ್ಲಿ 517,000 ವಾಹನಗಳನ್ನು ಮಾರಾಟ ಮಾಡಲಾಗಿದೆ. ಕಳೆದ ವರ್ಷದ ಎರಡನೇ ತ್ರೈಮಾಸಿಕ ಅವಧಿಯಲ್ಲಿ 210,000 ವಾಹನಗಳನ್ನು ಮಾರಾಟ ಮಾಡಲಾಗಿತ್ತು.

ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ.67ರಷ್ಟು ಏರಿಕೆಯಾಗಿ 59,000 ವಾಹನಗಳನ್ನು ಮಾರಾಟ ಮಾಡಲಾಗಿತ್ತು.
ಸಂಬಂಧಿತ ಮಾಹಿತಿ ಹುಡುಕಿ