ಉಕ್ಕು ಸಾಮ್ರಾಜ್ಯದ ಬೃಹತ್ ಕಂಪೆನಿಯಾದ ಅರ್ಸೆಲ್ಲರ್ ಮಿತ್ತಲ್, ಸೆಪ್ಟೆಂಬರ್ 30ಕ್ಕೆ ಮೂರನೇ ತ್ರೈಮಾಸಿಕ ಅಂತ್ಯಗೊಂಡಂತೆ 1.35 ಬಿಲಿಯನ್ ಡಾಲರ್ ನಿವ್ವಳ ಲಾಭಗಳಿಸಿದೆ ಎಂದು ಕಂಪೆನಿ ಮೂಲಗಳು ತಿಳಿಸಿವೆ.
ಕಳೆದ ವರ್ಷದ ಜುಲೈ-ಸೆಪ್ಟೆಂಬರ್ ತ್ರೈಮಾಸಿಕ ಅವಧಿಯಲ್ಲಿ, ಕಂಪೆನಿ 910 ಮಿಲಿಯನ್ ಡಾಲರ್ ನಿವ್ವಳ ಲಾಭಗಳಿಸಿದ್ದು ಎಂದು ಕಂಪೆನಿ ಹೊರಡಿಸಿದ ಪ್ರಕಟಣೆಯಲ್ಲಿ ಬಹಿರಂಗಪಡಿಸಿದೆ.
ಜಾಗತಿಕ ಬೇಡಿಕೆಯ ಏರಿಕೆಯಿಂದಾಗಿ ಮೂರನೇ ತ್ರೈಮಾಸಿಕ ಅವಧಿಯಲ್ಲಿ ನಿವ್ವಳ ಲಾಭದಲ್ಲಿ ಹೆಚ್ಚಳವಾಗಿದೆ. ನಾಲ್ಕನೇ ತ್ರೈಮಾಸಿಕ ಅವಧಿಯಲ್ಲಿ ನಿವ್ವಳ ಲಾಭದಲ್ಲಿ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಗಳಿವೆ ಎಂದು ಅರ್ಸೆಲ್ಲರ್ ಮಿತ್ತಲ್ ಮುಖ್ಯಸ್ಥ ಲಕ್ಷ್ಮಿ ಮಿತ್ತಲ್ ತಿಳಿಸಿದ್ದಾರೆ.
ಸೆಪ್ಟೆಂಬರ್ 30ಕ್ಕೆ ತ್ರೈಮಾಸಿಕ ಅಂತ್ಯಗೊಂಡಂತೆ, ನಿವ್ವಳ ಮಾರಾಟದಲ್ಲಿ 16.17 ಬಿಲಿಯನ್ ಡಾಲರ್‌ಗಳಿಂದ 21.3 ಬಿಲಿಯನ್ ಡಾಲರ್‌ಗಳಿಗೆ ಏರಿಕೆಯಾಗಿದೆ ಎಂದು ಮಿತ್ತಲ್ ವಿವರಣೆ ನೀಡಿದ್ದಾರೆ.