ಸತ್ಯಂ ಕಂಪ್ಯೂಟರ್ ಬಹುಕೋಟಿ ಹಗರಣದ ಪ್ರಮುಖ ಆರೋಪಿಗಳಾದ ರಾಮಲಿಂಗಾರಾಜು ಮತ್ತು ಇತರ ಐದು ಆರೋಪಿಗಳಿಗೆ ನೀಡಿದ್ದ ಜಾಮೀನನ್ನು ಸರ್ವೋಚ್ಚ ನ್ಯಾಯಾಲಯ ಯಾವುದೇ ಕಾರಣ ನೀಡದೆ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ವಿಚಾರಣೆಯನ್ನು ಜುಲೈ 2011ರೊಳಗೆ ವಿಚಾರಣೆಯನ್ನು ಪೂರ್ಣಗೊಳಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಆದೇಶಿಸಿದ್ದು, ಆರೋಪಿಗಳು ನವೆಂಬರ್ 8ರೊಳಗೆ ಶರಣಾಗುವಂತೆ ಆದೇಶ ಹೊರಡಿಸಿದೆ.
ಹೈದ್ರಾಬಾದ್‌ನ ಸ್ಥಳೀಯ ನ್ಯಾಯಾಲಯ ಸತ್ಯಂ ಹಗರಣದಲ್ಲಿ ಭಾಗಿಯಾದ ಎಲ್ಲಾ 10 ಆರೋಪಿಗಳ ವಿರುದ್ಧ, ಆರೋಪಗಳನ್ನು ದಾಖಲಿಸಿದೆ ಎಂದು ನ್ಯಾಯಾಲಯದ ಮೂಲಗಳು ತಿಳಿಸಿವೆ.
ಸ್ಥಳೀಯ ನ್ಯಾಯಾಲಯ, ಸತ್ಯಂ ವಿಚಾರಣೆಯನ್ನು ನವೆಂಬರ್ 2ಕ್ಕೆ ಮುಂದೂಡಿದೆ.