ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » 3ವರ್ಷಗಳಲ್ಲಿ 85,000 ಬ್ಯಾಂಕ್ ಉದ್ಯೋಗಿಗಳ ನೇಮಕ (Job seekers | Government | Banks | Recruit | Public sector)
Bookmark and Share Feedback Print
 
ಬ್ಯಾಂಕ್‌ಗಳಲ್ಲಿ ಉದ್ಯೋಗ ದೊರೆಯಬೇಕು ಎಂದು ಬಯಸುವವರಿಗೊಂದು ಸಂತಸದ ಸುದ್ದಿ ಬಂದಿದೆ.ಸಾರ್ವಜನಿಕ ಕ್ಷೇತ್ರದ ಬ್ಯಾಂಕ್‌ಗಳು ಮುಂಬರುವ ಮೂರು ವರ್ಷಗಳ ಅವಧಿಯಲ್ಲಿ 85,000 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಿವೆ.

ಸರಕಾರಿ ಸ್ವಾಮ್ಯದ ಬ್ಯಾಂಕ್‌ಗಳು 34,000 ಅಧಿಕಾರಿಗಳು ಹಾಗೂ 51,000 ಗುಮಾಸ್ತರುಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೊನೆಲ್ ಸೆಲೆಕ್ಷನ್(ಐಬಿಪಿಎಸ್) ಮಂಡಳಿ ಮೂಲಕ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

2009-10ರ ಅವಧಿಯಲ್ಲಿ ಐಬಿಪಿಎಸ್ ಸಂಸ್ಥೆ, ದೇಶದ 125 ಕೇಂದ್ರಗಳಲ್ಲಿ ಬ್ಯಾಂಕ್ ಪರೀಕ್ಷೆಗಳನ್ನು ಆಯೋಜಿಸಿ ಸುಮಾರು 60 ಲಕ್ಷ ಅಭ್ಯರ್ಥಿಗಳ ಪರೀಕ್ಷೆ ನಡೆಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ