ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್ಛ: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ (Sensex | Interbank foreign exchange | Indian rupee)
Bookmark and Share Feedback Print
 
ಏಷ್ಯಾದ ಮಾರುಕಟ್ಟೆಗಳಲ್ಲಿ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಚೇತರಿಕೆಯಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 12 ಪೈಸೆ ಇಳಿಕೆಯಾಗಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 9 ಪೈಸೆ ಇಳಿಕೆಯಾಗಿ 44.44/45 ರೂಪಾಯಿಗಳಿಗೆ ತಲುಪಿತ್ತು.ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 12 ಪೈಸೆ ಇಳಿಕೆಯಾಗಿ 44.56 ರೂಪಾಯಿಗಳಿಗೆ ತಲುಪಿದೆ.

ಏಷ್ಯಾದ ಮಾರುಕಟ್ಟೆಗಳಲ್ಲಿ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಚೇತರಿಕೆಯಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಇಳಿಕೆಯಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ಅಭಿಪ್ರಾಯಪಟ್ಟಿದ್ದಾರೆ.

ಅದನ್ನು ಹೊರತುಪಡಿಸಿ, ಅಮುದು ವಹಿವಾಟುದಾರರು ಹಾಗೂ ತೈಲ ಕಂಪೆನಿಗಳಿಂದ ಮಾಸಾಂತ್ಯದ ಹಿನ್ನೆಲೆಯಲ್ಲಿ, ಡಾಲರ್ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ, ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿದೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 86.27 ಪಾಯಿಂಟ್‌ಗಳ ಕುಸಿತ ಕಂಡು 20,135.12 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ