ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್ : ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತ (Sensex | Rupee | Dollar)
Bookmark and Share Feedback Print
 
ಮಾಸಂತ್ಯದಿಂದಾಗಿ ಡಾಲರ್ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 3 ಪೈಸೆ ಕುಸಿತವಾಗಿ 44.48 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ ರೂಪಾಯಿ ಅಲ್ಪ ಕುಸಿತ ಕಂಡು 44.45/46 ರೂಪಾಯಿಗಳಿಗೆ ತಲುಪಿದೆ.ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 3 ಪೈಸೆ ಕುಸಿತವಾಗಿ 44.48 ರೂಪಾಯಿಗಳಿಗೆ ತಲುಪಿದೆ.

ಡಾಲರ್ ಎದುರಿಗೆ ಏಷ್ಯಾ ಕರೆನ್ಸಿಗಳ ಮೌಲ್ಯದಲ್ಲಿ ಇಳಿಕೆ ಹಾಗೂ ಮಾಸಾಂತ್ಯದಿಂದಾಗಿ ಡಾಲರ್ ಬೇಡಿಕೆಯಲ್ಲಿ ಹೆಚ್ಚಳದಿಂದಾಗಿ, ರೂಪಾಯಿ ಮೌಲ್ಯದ ಕುಸಿತಕ್ಕೆ ಕಾರಣವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮದ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 114.40 ಪಾಯಿಂಟ್‌ಗಳ ಏರಿಕೆ ಕಂಡು 20,119.77 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಸೆನ್ಸೆಕ್ಸ್, ರೂಪಾಯಿ, ಡಾಲರ್