ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಭಾರತೀಯ ಸಾಫ್ಟ್‌ವೇರ್ ರಫ್ತು ವಹಿವಾಟಿನಲ್ಲಿ ಹೆಚ್ಚಳ (IT exports | India | Anticipate | TCS | Infosys)
Bookmark and Share Feedback Print
 
ಭಾರತದ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಕೆಲ ಬೃಹತ್ ಕಂಪೆನಿಗಳು ಎರಡನೇ ತ್ರೈಮಾಸಿಕ ಅವಧಿಯ ನಿವ್ವಳ ಲಾಭದಲ್ಲಿ ಏರಿಕೆಯಾಗಿದ್ದು,ನಿರೀಕ್ಷೆಗಿಂತ ಹೆಚ್ಚಳವಾಗಿದೆ ಎಂದು ಇನ್ಫೋಸಿಸ್ ಕಂಪೆನಿಯ ಮುಕ್ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಗೋಪಾಲಕೃಷ್ಣನ್ ಹೇಳಿದ್ದಾರೆ.

ಕಳೆದ ವರ್ಷದ ಅವಧಿಯಲ್ಲಿ ಶೇ.5ರಷ್ಟಿದ್ದ ಸಾಫ್ಟ್‌ವೇರ್ ರಫ್ತು ವಹಿವಾಟು , 2010-11ರ ಅವಧಿಯಲ್ಲಿ ಶೇ.13ರಿಂದ ಶೇ.15ಕ್ಕೆ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.

ಎರಡನೇ ತ್ರೈಮಾಸಿಕ ಅವಧಿಯಲ್ಲಿ ನಿವ್ವಳ ಲಾಭದಲ್ಲಿ ಏರಿಕೆಯಾಗಿದ್ದು, ಮೂರನೇ ತ್ರೈಮಾಸಿಕ ಅವಧಿಯಲ್ಲಿ ಮತ್ತಷ್ಟು ಏರಿಕೆಯಾಗುವ ವಿಶ್ವಾಸವಿದೆ ಎಂದು ಕಾರ್ಯಕ್ರಮದಲ್ಲಿ ಗೋಪಾಲಕೃಷ್ಣನ್ ಅಭಿಪ್ರಾಯಪಟ್ಟಿದ್ದಾರೆ.

ದೇಶದ ಪ್ರಮುಖ ಸಾಫ್ಟ್‌ವೇರ್ ಕಂಪೆನಿಗಳಾದ ಟಾಟಾ ಕನ್ಸಲ್‌ಟನ್ಸಿ ಸರ್ವಿಸಸ್ ಮತ್ತು ವಿಪ್ರೋ ಕಂಪೆನಿಗಳು ಎರಡನೇ ತ್ರೈಮಾಸಿಕ ಅವಧಿಯ ನಿವ್ವಳ ಲಾಭದಲ್ಲಿ ದ್ವಿಗುಣವಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ