ಮಾಸಾಂತ್ಯದಿಂದಾಗಿ ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳದಿಂದಾಗಿ, ಡಾಲರ್ ಎದುರಿಗೆ ರೂಪಾಯ ಮೌಲ್ಯದಲ್ಲಿ 1 ಪೈಸೆ ಇಳಿಕೆಯಾಗಿ 44.54 ರೂಪಾಯಿಗಳಿಗೆ ತಲುಪಿದೆ.
ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳ ಹಾಗೂ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಲು ಕಾರಣವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ 8 ಪೈಸೆ ಏರಿಕೆ ಕಂಡು 44.53/54 ರೂಪಾಯಿಗಳಿಗೆ ತಲುಪಿತ್ತು.
ಏತನ್ಮಧ್ಯೆ, ಮುಂಬೈ ಶೇರುಪೇಟೆಯಲ್ಲಿ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 64.46 ಪಾಯಿಂಟ್‌ಗಳ ಏರಿಕೆ ಕಂಡು 20,005.50 ಅಂಕಗಳಿಗೆ ತಲುಪಿದೆ.