ವಿದೇಶಿ ಬಂಡವಾಳದ ಒಳಹರಿವಿನ ಹೆಚ್ಚಳದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 6 ಪೈಸೆ ಏರಿಕೆಯಾಗಿದ್ದು,44.37 ರೂಪಾಯಿಗಳಿಗೆ ತಲುಪಿದೆ.
ಏಷ್ಯಾದ ಕರೆನ್ಲಿಗಳ ಎದುರು ಡಾಲರ್ ಮೌಲ್ಯದ ಕುಸಿತ ಹಾಗೂ ವಿದೇಶಿ ಬಂಡವಾಳದ ಒಳಹರಿವಿನ ಹೆಚ್ಚಳದಿಂದಾಗಿ, ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಿದೆ ಎಂದು ಡೀಲರ್‌ಗಳು ತಿಳಿಸಿದ್ದಾರೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 10 ಏರಿಕೆಯಾಗಿ 44.43/44 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 6 ಪೈಸೆ ಏರಿಕೆಯಾಗಿದ್ದು,44.37 ರೂಪಾಯಿಗಳಿಗೆ ತಲುಪಿದೆ.
ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 294.07 ಪಾಯಿಂಟ್‌ಗಳ ಏರಿಕೆ ಕಂಡು 20,326.41 ಅಂಕಗಳಿಗೆ ತಲುಪಿರೆ.