ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಹಣದುಬ್ಬರ ದರ ಏರಿಕೆ ಕಳವಳಕ್ಕೆ ಕಾರಣ:ಪ್ರಣಬ್ ಮುಖರ್ಜಿ (Reserve bank | Rbi | Pranab mukherjee | Inflation)
Bookmark and Share Feedback Print
 
ಹಣದುಬ್ಬರ ದರ ಏರಿಕೆ ಕಳವಳಕ್ಕೆ ಕಾರಣವಾಗಿದ್ದು, ಹಣದುಬ್ಬರ ನಿಯಂತ್ರಣಕ್ಕಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಆರ್ಥಿಕ ಪರಿಷ್ಕರಣ ಸಂದರ್ಭದಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ ಎಂದು ಪ್ರಣಬ್ ಮುಖರ್ಜಿ ಹೇಳಿದ್ದಾರೆ.

ಆಹಾರ ಹಣದುಬ್ಬರ ದರ ಏರಿಕೆಯಿಂದಾಗಿ, ಹಣದುಬ್ಬರ ದರ ನಿರಂತರವಾಗಿ ಏರಿಕೆ ಕಾಣುತ್ತಿದೆ. ಮುಂಬರುವ ದಿನಗಳಲ್ಲಿ ಹಣದುಬ್ಬರ ದರ ಇಳಿಕೆಯಾಗುವ ವಿಶ್ವಾಸವಿದೆ ಎಂದು ಮುಖರ್ಜಿ ಐಬಿಎ ಆಯೋಜಿಸಿದ ಸಭೆಯಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ ತಿಂಗಳ ಅವಧಿಯಲ್ಲಿ ಒಟ್ಟಾರೆ ಹಣದುಬ್ಬರ ದರ ಶೇ.8.62ರಷ್ಟು ಏರಿಕೆ ಕಂಡಿದೆ. ಭರಾತೀಯ ರಿಸರ್ವ್ ಬ್ಯಾಂಕ್ ಪ್ರಕಾರ ಶೇ.5-6ರಷ್ಟು ಹಣದುಬ್ಬರ ದರ ಮಾತ್ರ ಅಭಿವೃದ್ದಿಗೆ ಪೂರಕವಾಗಿರುತ್ತದೆ ಎಂದು ಹೇಳಿಕೆ ನೀಡಿದೆ.

ಕಳೆದ ಮೂರು ತಿಂಗಳುಗಳ ಅವಧಿಯಲ್ಲಿ ಆಹಾರ ಹಣದುಬ್ಬರ ದರ ಎರಡಂಕಿಗೆ ತಲುಪಿದೆ.ಆಹಾರ ಹಣದುಬ್ಬರ ದರ ಅಕ್ಟೋಬರ್ ಮಧ್ಯಭಾಗದಲ್ಲಿ ಶೇ.13.75ರಷ್ಟು ಏರಿಕೆ ಕಂಡಿತ್ತು.
ಸಂಬಂಧಿತ ಮಾಹಿತಿ ಹುಡುಕಿ