ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಬಲವರ್ಧನೆ (Interbank Foreign Exchange | Equity markets | Dollar | Bse)
Bookmark and Share Feedback Print
 
ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯದ ಕುಸಿತದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 6 ಪೈಸೆ ಏರಿಕೆಯಾಗಿ 44.41 ರೂಪಾಯಿಗಳಿಗೆ ತಲುಪಿದೆ.

ಏತನ್ಮಧ್ಯೆ, ಶೇರುಪೇಟೆಗಳಲ್ಲಿ ಅಲ್ಪಮಟ್ಟಿನ ಡಾಲರ್ ಬೇಡಿಕೆ ಕಂಡುಬಂದಿದ್ದರಿಂದ, ರೂಪಾಯಿ ಮೌಲ್ಯದಲ್ಲಿ ಮತ್ತಷ್ಟು ಚೇತರಿಕೆಯಾಗುವುದನ್ನು ತಡೆದಿದೆ ಎಂದು ಡೀಲರ್‌ಗಳು ತಿಳಿಸಿದ್ದಾರೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 4 ಪೈಸೆ ಏರಿಕೆಯಾಗಿ 44.47/48 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 6 ಪೈಸೆ ಏರಿಕೆಯಾಗಿ 44.41 ರೂಪಾಯಿಗಳಿಗೆ ತಲುಪಿದೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 36.77 ಪಾಯಿಂಟ್‌ಗಳ ಏರಿಕೆ ಕಂಡು 20,318.86 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ