ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಆರ್‌ಬಿಐನಿಂದ ರೆಪೋ ರಿವರ್ಸ ರೆಪೋ ದರ ಹೆಚ್ಚಳ ಘೋಷಣೆ (Reverse repo rate | Repo rate | RBI | Interest rates | Duvvuri Subbarao | CRR)
ಹಣದುಬ್ಬರ ದರ ನಿಯಂತ್ರಣಕ್ಕಾಗಿ ಸತತ ಆರನೇ ಬಾರಿಗೆ ರೆಪೋ ದರಗಳಲ್ಲಿ ಏರಿಕೆ ಘೋಷಿಸಿರುವ ಭಾರತೀಯ ರಿಸರ್ವ್ ಬ್ಯಾಂಕ್, ಇಂದು ನಡೆದ ಆರ್ಥಿಕ ಪರಿಷ್ಕರಣ ಸಭೆಯಲ್ಲಿ 25 ಬೇಸಿಸ್ ಪಾಯಿಂಟ್‌ಗಳಷ್ಟು ರೆಪೋ ಮತ್ತು ರಿವರ್ಸ್ ರೆಪೋ ದರಗಳಲ್ಲಿ ಏರಿಕೆ ಘೋಷಿಸಿದ್ದು,ಸಿಆರ್‌ಆರ್ ದರದಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಾಗತಿಕ ಆರ್ಥಿಕ ಕುಸಿತದಿಂದ ಹೊರಬಂದ ದೇಶದ ಆರ್ಥಿಕತೆ ಚೇತರಿಸಿಕೊಂಡಿದೆ. ಆದರೆ, ನಿರಂತರವಾಗಿ ಏರಿಕೆ ಕಾಣುತ್ತಿರುವ ಹಣದುಬ್ಬರ ದರವನ್ನು ನಿಯಂತ್ರಿಸಲು ಕೇಂದ್ರ ಸರಕಾರ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.
ಆರ್ಥಿಕತೆ ಚೇತರಿಕೆ ಹಾಗೂ ಮುಂಬರುವ ದಿನಗಳಲ್ಲಿನ ಹಣದುಬ್ಬರ ದರ ನಿಯಂತ್ರಣಕ್ಕಾಗಿ, ರೆಪೋ ದರಗಳಲ್ಲಿ ಏರಿಕೆ ಮಾಡಲಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗೌವರ್ನರ್ ಡಿ.ಸುಬ್ಬಾರಾವ್ ತಿಳಿಸಿದ್ದಾರೆ.
ಆಹಾರ ಹಣದುಬ್ಬರ ದರ ಏರಿಕೆಯಿಂದಾಗಿ, ಹಣದುಬ್ಬರ ದರದಲ್ಲಿ ಏರಿಕೆಯಾಗುತ್ತಿದ್ದು, ಅಕ್ಟೋಬರ್ ಮಧ್ಯಭಾಗದ ಅವಧಿಯಲ್ಲಿ ಶೇ.13.75ಕ್ಕೆ ತಲುಪಿತ್ತು, ವಾರ್ಷಿಕ ಸಗಟು ಸೂಚ್ಯಂಕ ದರ ಶೇ.8.62ರಷ್ಟು ಏರಿಕೆ ಕಂಡಿದೆ ಎಂದು ವಿವರಣೆ ನೀಡಿದ್ದಾರೆ.
ಏಷ್ಯಾ ಖಂಡದ ಮೂರನೇ ಬೃಹತ್ ಆರ್ಥಿಕ ರಾಷ್ಟ್ರವಾದ ಭಾರತ, ಅಕ್ಟೋಬರ್ ತಿಂಗಳ ಅವಧಿಯಲ್ಲಿ ಉತ್ಪಾದಕ ಕ್ಷೇತ್ರ ಶೇ57.2 ರಷ್ಟು ಚೇತರಿಕೆ ಕಂಡಿದೆ. ಸೆಪ್ಟೆಂಬರ್ ತಿಂಗಳ ಅವಧಿಯಲ್ಲಿ ಸಗಟು ಸೂಚ್ಯಂಕ ದರ ಶೇ.55.1ರಷ್ಟು ಏರಿಕೆ ಕಂಡಿತ್ತು.