ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್:ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಬಲವರ್ಧನೆ (Rupee | Dollar | Sensex | Trade | Foreign Exchange)
Bookmark and Share Feedback Print
 
ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಕುಸಿತದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 12 ಪೈಸೆ ಏರಿಕೆಯಾಗಿ 44.25 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 10 ಪೈಸೆ ಏರಿಕೆಯಾಗಿ 44.37/38 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಬಿಕ ವಹಿವಾಟಿನಲ್ಲಿ ಮತ್ತೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 12 ಪೈಸೆ ಏರಿಕೆಯಾಗಿ 44.25 ರೂಪಾಯಿಗಳಿಗೆ ತಲುಪಿದೆ.

ಯುರೋ, ಮತ್ತು ಇತರ ಏಷ್ಯಾ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಕುಸಿತದಿಂದಾಗಿ, ರೂಪಾಯಿ ಮೌಲ್ಯ ಚೇತರಿಕೆಯಾಗಲು ಮೂಲ ಕಾರಣವಾಗಿದೆ ಎಂದು ಮಾರುಕಟ್ಟೆಗಳ ಡೀಲರ್‌‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 175.23 ಪಾಯಿಂಟ್‌ಗಳ ಏರಿಕೆ ಕಂಡು 20,520.92 ರೂಪಾಯಿಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ