ವಿಶ್ವದ ಕಾರು ತಯಾರಿಕೆ ಕಂಪೆನಿಗಳಲ್ಲಿ ಮುಂಚೂಣಿಯಲ್ಲಿರುವ ವೊಕ್ಸ್ವಾಗೆನ್, ಪೋಲೋ ಮತ್ತು ಸೆಡಾನ್ ಕಾರುಗಳ ಮಾರಾಟದಲ್ಲಿ ಏರಿಕೆಯಾಗಿದ್ದರಿಂದ, ಭಾರತದಲ್ಲಿ ಅಕ್ಟೋಬರ್ ತಿಂಗಳ ಅವಧಿಯಲ್ಲಿ 4,343 ಕಾರುಗಳನ್ನು ಮಾರಾಟ ಮಾಡಲಾಗಿದೆ ಎಂದು ಕಂಪೆನಿಯ ಮೂಲಗಳು ತಿಳಿಸಿವೆ.
ಅಕ್ಟೋಬರ್ ತಿಂಗಳ ಅವಧಿಯ ಕಾರುಗಳ ಮಾರಾಟದಲ್ಲಿ ಏರಿಕೆಯಾಗಿದ್ದು, 4,343 ವಾಹನಗಳನ್ನು ಮಾರಾಟ ಮಾಡಲಾಗಿದೆ ಎಂದು ಕಂಪೆನಿ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.
ಕಳೆದ ವರ್ಷದ ಅಕ್ಟೋಬರ್ ತಿಂಗಳ ಅವಧಿಯಲ್ಲಿ 223 ಕಾರುಗಳನ್ನು ಮಾರಾಟ ಮಾಡಲಾಗಿತ್ತು ಎಂದು ಕಂಪೆನಿ ವರದಿಯಲ್ಲಿ ಬಹಿರಂಗಪಡಿಸಿದೆ.
ಗ್ರಾಹಕರ ಬೇಡಿಕೆಗಳನ್ನು ಪೂರೈಸಲು ಕಂಪೆನಿ, ಪೋಲೋ ಮತ್ತು ವೆಂಟೊ ಮಾಡೆಲ್ ಕಾರುಗಳ ಉತ್ಪಾದನೆಯಲ್ಲಿ ಹೆಚ್ಚಳಗೊಳಿಸಲಾಗಿದೆ ಎಂದು ವೊಕ್ಸ್ವಾಗೆನ್ ಅಧಿಕಾರಿಗಳು ತಿಳಿಸಿದ್ದಾರೆ.