ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯದಲ್ಲಿ ಇಳಿಕೆಯಾಗಿದ್ದರಿಂದ, ಬ್ಯಾಂಕ್‌ಗಳು ಮತ್ತು ಅಮುದು ವಹಿವಾಟುದಾರರು ಡಾಲರ್ ಮಾರಾಟದಲ್ಲಿ ತೊಡಗಿದ್ದರಿಂದ,ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 19 ಪೈಸೆ ಚೇತರಿಕೆ ಕಂಡು 44.16 ರೂಪಾಯಿಗಳಿಗೆ ತಲುಪಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ, ಅಲ್ಪ ಚೇತರಿಕೆ ಕಂಡು 44.35/36 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 19 ಪೈಸೆ ಚೇತರಿಕೆ ಕಂಡು 44.16 ರೂಪಾಯಿಗಳಿಗೆ ತಲುಪಿದೆ.
ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯದಲ್ಲಿ ಇಳಿಕೆಯಾಗಿದ್ದರಿಂದ, ಬ್ಯಾಂಕ್‌ಗಳು ಮತ್ತು ಅಮುದು ವಹಿವಾಟುದಾರರು ಡಾಲರ್ ಮಾರಾಟದಲ್ಲಿ ತೊಡಗಿದ್ದರಿಂದ, ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ದೇಶಿಯ ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ರೂಪಾಯಿ ಮೌಲ್ಯ ಚೇತರಿಕೆಗೆ ಕಾರಣವಾಗಿದೆ ಎಂದು ಡೀಲರ್‌ಗಳು ಅಭಿಪ್ರಾಯಪಟ್ಟಿದ್ದಾರೆ.
ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 275 ಪಾಯಿಂಟ್‌ಗಳ ಏರಿಕೆ ಕಂಡಿದೆ.