ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಚೇತರಿಕೆ ಕಂಡಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 11 ಪೈಸೆ ಕುಸಿತವಾಗಿ 44.32 ರೂಪಾಯಿಗಳಿಗೆ ತಲುಪಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 14 ಪೈಸೆ ಏರಿಕೆ ಕಂಡು 44.21/22 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 11 ಪೈಸೆ ಕುಸಿತವಾಗಿ 44.32 ರೂಪಾಯಿಗಳಿಗೆ ತಲುಪಿದೆ.
ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಚೇತರಿಕೆ ಕಂಡಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.
ಏತನ್ಮದ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 71 ಪಾಯಿಂಟ್‌ಗಳ ಏರಿಕೆ ಕಂಡು 21,075.71 ಅಂಕಗಳಿಗೆ ತಲುಪಿದೆ.