ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ (Rupee | Opening trade | FII inflows | Dollar)
Bookmark and Share Feedback Print
 
ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಚೇತರಿಕೆಯಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 2 ಪೈಸೆ ಏರಿಕೆಯಾಗಿ 44.39 ರೂಪಾಯಿಗಳಿಗೆ ತಲುಪಿದೆ.

ಏತನ್ಮಧ್ಯೆ, ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಮತ್ತಷ್ಟು ಕುಸಿತವಾಗುವುದನ್ನು ತಡೆದಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ 16 ಪೈಸೆ ಇಳಿಕೆ ಕಂಡು 44.37/38 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 2 ಪೈಸೆ ಏರಿಕೆಯಾಗಿ 44.39 ರೂಪಾಯಿಗಳಿಗೆ ತಲುಪಿದೆ.

ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಚೇತರಿಕೆಯಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 69.82 ಪಾಯಿಂಟ್‌ಗಳ ಏರಿಕೆ ಕಂಡು 20,922.20 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ