ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಚೇತರಿಕೆಯಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 9 ಪೈಸೆ ಇಳಿಕೆ ಕಂಡು 44.40 ರೂಪಾಯಿಗಳಿಗೆ ತಲುಪಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 6 ಪೈಸೆ ಏರಿಕೆ ಕಂಡು 44.31/32 ರೂಪಾಯಿಗಳಿಗೆ ತಲುಪಿತ್ತು.ಆದರೆ, ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 9 ಪೈಸೆ ಇಳಿಕೆ ಕಂಡು 44.40 ರೂಪಾಯಿಗಳಿಗೆ ತಲುಪಿದೆ.
ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಚೇತರಿಕೆಯಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿದೆ. ಆದರೆ, ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳದಿಂದಾಗಿ, ರೂಪಾಯಿ ಮೌಲ್ಯದಲ್ಲಿ ಮತ್ತಷ್ಟು ಕುಸಿತವಾಗುವುದನ್ನು ತಡೆದಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಏತನ್ಮಧ್ಯೆ, ಬಿಎಸ್‌ಇ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 42.85 ಪಾಯಿಂಟ್‌ಗಳ ಇಳಿಕೆ ಕಂಡು 20,889.03 ಅಂಕಗಳಿಗೆ ತಲುಪಿದೆ.