ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯದ ಕುಸಿತದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 5 ಪೈಸೆ ಏರಿಕೆ ಕಂಡು 44.25 ರೂಪಾಯಿಗಳಿಗೆ ತಲುಪಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ, ಡಾಲರ್ ಎದುರಿಗೆ ಅಲ್ಪ ಕುಸಿತ ಕಂಡು 44.30/31ರೂಪಾಯಿಗಳಿಗೆ ತಲುಪಿತ್ತು. ಆದರೆ, ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 5 ಪೈಸೆ ಏರಿಕೆ ಕಂಡು 44.25 ರೂಪಾಯಿಗಳಿಗೆ ತಲುಪಿದೆ.
ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯದ ಕುಸಿತ ಹಾಗೂ ವಿದೇಶಿ ಬಂಡವಾಳದ ಒಳಹರಿವಿನ ಹೆಚ್ಚಳದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಏತನ್ಮದ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 60.24ರಷ್ಟು ಏರಿಕೆ ಕಂಡು 20,935.95 ಅಂಕಗಳಿಗೆ ತಲುಪಿದೆ.