ಜಾಗತಿಕ ಮಾರುಕಟ್ಟೆಗಳ ಸ್ಥಿರ ವಹಿವಾಟು ಹಾಗೂ ಚಿನ್ನಾಭರಣಗಳ ತಯಾರಕರು ಮತ್ತು ಹೂಡಿಕೆದಾರರಿಂದ ಚಿನ್ನದ ಖರೀದಿಯಲ್ಲಿ ಏರಿಕೆಯಾಗಿದ್ದರಿಂದ ಚಿನ್ನದ ದರ ಪ್ರತಿ 10 ಗ್ರಾಂಗೆ 130 ರೂಪಾಯಿಗಳಷ್ಟು ಏರಿಕೆಯಾಗಿ 20,600 ರೂಪಾಯಿಗಳಿಗೆ ತಲುಪಿದೆ.
ಶೇರುಪೇಟೆಗಳ ತೊಳಲಾಟದ ವಹಿವಾಟಿನಿಂದಾಗಿ ಹೂಡಿಕೆದಾರರು ಸುರಕ್ಷಿತ ಠೇವಣಿಯಾದ ಚಿನ್ನದ ಖರೀದಿಯಲ್ಲಿ ತೊಡಗಿದ್ದರಿಂದ, ಚಿನ್ನದ ದರದಲ್ಲಿ ಏರಿಕೆಯಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಕೈಗಾರಿಕೋದ್ಯಮ ಕ್ಷೇತ್ರದ ಚೇತರಿಕೆಯಾಗಿ ಬೆಳ್ಳಿಯ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ,ಬೆಳ್ಳಿಯ ದರ ಪ್ರತಿ ಕೆಜಿಗೆ 50 ರೂಪಾಯಿಗಳಷ್ಟು ಏರಿಕೆಯಾಗಿ 40,800 ರೂಪಾಯಿಗಳಿಗೆ ತಲುಪಿದೆ.
ಸಾಗರೋತ್ತರ ಮಾರುಕಟ್ಟೆಗಳಲ್ಲಿ ಚಿನ್ನದ ದರ ಪ್ರತಿ ಔನ್ಸ್‌ಗೆ 7.90 ಡಾಲರ್‌ಗಳಿಗೆ ಏರಿಕೆಯಾಗಿ 1,411.30 ಡಾಲರ್‌ಗಳಿಗೆ ತಲುಪಿದೆ.