ಹಬ್ಬದ ಸೀಜನ್ ಹಿನ್ನೆಲೆಯಲ್ಲಿ ನಗದು ಹಣದ ಹರಿವಿನಲ್ಲಿ ಕೊರತೆಯಾಗಿದ್ದು, ಮಾಸಾಂತ್ಯದ ವೇಳೆಗೆ ಇಳಿಕೆಯಾಗಲಿದೆ ಎಂದು ಪ್ರಧಾನಮಂತ್ರಿ ಆರ್ಥಿಕ ಸಲಹಾ ಸಮಿತಿಯ ಮುಖ್ಯಸ್ಥರಾದ ಸಿ.ರಂಗರಾಜನ್ ಹೇಳಿದ್ದಾರೆ.
ಕೇಂದ್ರ ಸರಕಾರ ವೆಚ್ಚ ಏರಿಕೆ ಘೋಷಿಸಿರುವುದು ಮತ್ತು ಬಂಡವಾಳದ ಒಳಹರಿವು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ,ನಗದು ಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
ತಿಂಗಳಾಂತ್ಯದ ವೇಳೆಗೆ ಮಾರುಕಟ್ಟೆಗಳಲ್ಲಿ ನಗದು ಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಲಿದೆಯ ಯಾವುದೇ ರೀತಿಯ ಆತಂಕ ಬೇಡ. ಅಗತ್ಯವಾದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ನೆರವಿಗೆ ಸಿದ್ಧವಾಗಿದೆ ಎಂದು ರಂಗರಾಜನ್ ವಿವರಣೆ ನೀಡಿದ್ದಾರೆ.
ಪ್ರಸ್ತುತ ದೇಶದಲ್ಲಿ ನಗದು ಹರಿವಿನ ಕೊರತೆ ಎದುರಾಗಿದೆ ಎಂದು ಭಾವಿಸಿದ್ದೇನೆ. ಆದರೆ, ಮುಂಬರುವ ದಿನಗಳಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ವಿಶ್ವಾಸವಿದೆ ಎಂದು ಸಿ.ರಂಗರಾಜನ್ ತಿಳಿಸಿದ್ದಾರೆ.