ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಪುಣೆ ನಗರಕ್ಕೆ ಎರಡನೇ ವಿಮಾನ ನಿಲ್ದಾಣ ಅಗತ್ಯ: ಪಟೇಲ್ (Pune | Second airport | Praful Patel)
Bookmark and Share Feedback Print
 
ನಗರದಲ್ಲಿ ಎರಡನೇ ವಿಮಾನ ನಿಲ್ದಾಣದ ಅಗತ್ಯವಾಗಿದ್ದು, ಖಾಸಗಿ ಸಂಸ್ಥೆಗಳು ನೂತನ ವಿಮಾನ ನಿಲ್ದಾಣ ನಿರ್ಮಾಣದತ್ತ ಆಸಕ್ತಿ ತೋರಬೇಕು ಎಂದು ಕೇಂದ್ರದ ನಾಗರಿಕ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದ ಪುಣೆ ನಗರಕ್ಕೆ ಅತ್ಯುತ್ತಮ ಸಂಪರ್ಕ ಸೌಲಭ್ಯ ಅಗತ್ಯವಾಗಿದೆ. ಮಹಾರಾಷ್ಟ್ರ ಸರಕಾರ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಹಿಂದುಳಿದಿದ್ದರಿಂದ ಚಾಕನ್‌ ಬಳಿ ಉದ್ದೇಶಿಸಲಾಗಿರುವ ಎರಡನೇ ವಿಮಾನ ನಿಲ್ದಾಣ ಕಾಮಗಾರಿ ವಿಳಂಬವಾಗುತ್ತದೆ ಎಂದು ತಿಳಿಸಿದ್ದಾರೆ.

ಪುಣೆ ಮತ್ತು ಮುಂಬೈ ನಗರಕ್ಕೆ ಹೆಚ್ಚಿನ ಸಂಪರ್ಕ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದ್ದಾರೆ.

ಪುಣೆ ನಗರದಲ್ಲಿ ಎರಡನೇ ವಿಮಾನ ನಿಲ್ದಾಣ ಸ್ಥಾಪನೆಗಾಗಿ,ಕೇಂದ್ರ ಸರಕಾರ ಈಗಾಗಲೇ ಅನುಮತಿ ನೀಡಿದೆ ಎಂದು ಕೇಂದ್ರದ ನಾಗರಿಕ ವಿಮಾನಯಾನ ಖಾತೆ ಸಚಿವ ಪ್ರಫುಲ್ ಪಟೇಲ್ ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ