ನವದೆಹಲಿ: ಡೀಸೆಲ್ ಬೆಲೆ ನಿಗದಿಯನ್ನು ನಿಯಂತ್ರಣ ಮುಕ್ತಗೊಳಿಸುವ ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂದು ಪೆಟ್ರೋಲಿಯಂ ಖಾತೆ ಸಚಿವ ಮುರಳಿ ದಿಯೋರಾ ಸಂಸತ್ತಿಗೆ ತಿಳಿಸಿದ್ದಾರೆ. ವಾಸ್ತವ ದರಕ್ಕಿಂತ 2.62 ರೂಪಾಯಿ ಕಡಿಮೆ ಬೆಲೆಯಲ್ಲಿ ಪ್ರತಿ ಲೀಟರ್ ಡೀಸೆಲನ್ನು ಸರಕಾರಿ ಸ್ವಾಮ್ಯದ ಕಂಪನಿಗಳು ಮಾರಾಟ ಮಾಡುತ್ತಿವೆ ಎಂದೂ ಹೇಳಿದರು.