ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಚೇತರಿಕೆಯಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 7 ಪೈಸೆ ಕುಸಿತವಾಗಿ 45.64 ರೂಪಾಯಿಗಳಿಗೆ ತಲುಪಿದೆ.
ಅಮುದು ಹಾಗೂ ಬ್ಯಾಂಕ್ ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಎಂಟು ವಾರಗಳ ಕುಸಿತ ಕಂಡು 45.57/58 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 7 ಪೈಸೆ ಕುಸಿತವಾಗಿ 45.64 ರೂಪಾಯಿಗಳಿಗೆ ತಲುಪಿದೆ.
ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 68.29 ಪಾಯಿಂಟ್‌ಗಳ ಚೇತರಿಕೆ ಕಂಡು 19,760.13 ಅಂಕಗಳಿಗೆ ತಲುಪಿದೆ.