ಡಾಲರ್ ಎದುರಿಗೆ ಏಷ್ಯಾ ಕರೆನ್ಸಿಗಳ ಮೌಲ್ಯ ಕುಸಿತದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 4 ಪೈಸೆ ಕುಸಿತವಾಗಿ 45.74 ರೂಪಾಯಿಗಳಿಗೆ ತಲುಪಿದೆ.
ಹಿಂದಿನ ದಿನದ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಅಲ್ಪ ಕುಸಿತವಾಗಿತ್ತು.ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 4 ಪೈಸೆ ಕುಸಿತವಾಗಿ 45.74 ರೂಪಾಯಿಗಳಿಗೆ ತಲುಪಿದೆ.
ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಚೇತರಿಕೆ ಹಾಗೂ ಅಮುದು ವಹಿವಾಟುದಾರರು ಮತ್ತು ಬ್ಯಾಂಕ್‌ಗಳಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.
ಏತನ್ಮಧ್ಯೆ, ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇರುಪೇಟೆ ಸೂಚ್ಯಂಕ 122.10 ಪಾಯಿಂಟ್‌ಗಳ ಏರಿಕೆ ಕಂಡು 19,581.95 ಅಂಕಗಳಿಗೆ ತಲುಪಿದೆ.