ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಚಿನ್ನದ ಖರೀದಿಯಲ್ಲಿ ಕುಸಿತವಾಗಿದ್ದು, ಚಿನ್ನ ಮತ್ತು ಬೆಳ್ಳಿ ದರದಲ್ಲಿ ಕೂಡಾ ಇಳಿಕೆಯಾದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಏತನ್ಮಧ್ಯೆ, ಇಂದಿನ ಆರಂಭಿಕ ವಹಿವಾಟಿನಲ್ಲಿ ಚಿನ್ನದ ದರ ಪ್ರತಿ 10 ಗ್ರಾಂಗೆ 100 ರೂಪಾಯಿಗಳ ಏರಿಕೆಯಾಗಿ 20,700 ರೂಪಾಯಿಗಳಿಗೆ ತಲುಪಿದೆ. ಬೆಳ್ಳಿಯ ದರದಲ್ಲಿ ಕೂಡಾ ಪ್ರತಿ ಕೆಜಿಗೆ 200 ರೂಪಾಯಿಗಳಷ್ಟು ಏರಿಕೆಯಾಗಿ 42,300 ರೂಪಾಯಿಗಳಿಗೆ ಏರಿಕೆಯಾಗಿದೆ.
ಹೂಡಿಕೆದಾರರು ಹಾಗೂ ಚಿನ್ನದ ಸಂಗ್ರಹಕಾರರು ಚಿನ್ನದ ದರ ಇಳಿಕೆಯಾಗುವುದನ್ನು ನಿರೀಕ್ಷಿಸುತ್ತಿರುವ ಹಿನ್ನೆಲೆಯಲ್ಲಿ, ಚಿನ್ನದ ಬೇಡಿಕೆಯಲ್ಲಿ ಕುಸಿತವಾಗಿದೆ ಎಂದು ಚಿನಿವಾರಪೇಟೆಯ ಮೂಲಗಳು ತಿಳಿಸಿವೆ.
ಉತ್ತರ ಕೊರಿಯಾ ಮತ್ತು ದಕ್ಷಿಣ ಕೊರಿಯಾ ಮಧ್ಯೆ ಹೆಚ್ಚುತ್ತಿರುವ ಉದ್ರಿಕ್ತತೆಯಿಂದಾಗಿ, ಜಾಗತಿತ ಮಾರುಕಟ್ಟೆಗಳ ಕುಸಿತದಿಂದಾಗಿ ಚಿನ್ನದ ಬೇಡಿಕೆಯಲ್ಲಿ ಇಳಿಮುಖವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಸಾಗರೋತ್ತರ ಮಾರುಕಟ್ಟೆಗಳಲ್ಲಿ ಚಿನ್ನದ ದರ ಪ್ರತಿ ಔನ್ಸ್‌ಗೆ ಶೇ.0.4ರಷ್ಟು ಏರಿಕೆ ಕಂಡು 1,368.20 ಡಾಲರ್‌ಗಳಿಗೆ ತಲುಪಿದೆ.