ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ವಿಮಾನ ಪ್ರಯಾಣ ದರ ನ್ಯಾಯಸಮ್ಮತವಾಗಿರಲಿ: ಪ್ರಫುಲ್ (Praful Patel | Civil Aviation | Air fares | DGCA)
Bookmark and Share Feedback Print
 
ದೇಶದ ಖಾಸಗಿ ವಿಮಾನಯಾನ ಸಂಸ್ಥೆಗಳು ಹಬ್ಬದ ಸೀಜನ್ ಹಾಗೂ ರಜಾದಿನಗಳ ಹಿನ್ನೆಲೆಯಲ್ಲಿ, ಪ್ರಯಾಣ ದರ ಏರಿಕೆ ಘೋಷಿಸಿರುವುದು ನ್ಯಾಯಸಮ್ಮತವಲ್ಲ. ಕೂಡಲೇ ದರ ಏರಿಕೆಯನ್ನು ಹಿಂಪಡೆಯಬೇಕು ಎಂದು ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಪ್ರಫುಲ್ ಪಟೇಲ್ ಎಚ್ಚರಿಸಿದ್ದಾರೆ

ದೇಶಿಯ ಖಾಸಗಿ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ ಹೆಚ್ಚಿನ ದರವನ್ನು ವಸೂಲಿ ಮಾಡುತ್ತಿವೆ. ನ್ಯಾಯಸಮ್ಮತ ದರವನ್ನು ನಿಗದಿಪಡಿಸುವಂತೆ ಸಂದೇಶ ರವಾನಿಸಿದ್ದಾರೆ.

ಖಾಸಗಿ ವಿಮಾನ ಸಂಸ್ಥೆಗಳು ಹೆಚ್ಚಳ ದರ ಏರಿಕೆಯನ್ನು ಒಂದು ವೇಳೆ ಹಿಂದಕ್ಕೆ ಪಡೆಯದಿದ್ದಲ್ಲಿ ನಾಗರಿಕ ವಿಮಾನಯಾನ ಸಚಿವಾಲಯದ ಪ್ರಧಾನ ನಿರ್ದೇಶಕರು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದಕ್ಕಿಂತ ಮೊದಲು, ನಾಗರಿಕ ವಿಮಾನಯಾನ ಸಚಿವಾಲಯ ದೇಶಿಯ ಖಾಸಗಿ ವಿಮಾನಯಾನ ಸಂಸ್ಥೆಗಳಿಗೆ ಪ್ರಯಾಣ ದರವನ್ನು ಪಾರದರ್ಶಕವಾಗಿರುವಂತೆ ವೆಬ್‌ಸೈಟ್‌ಗಳಲ್ಲಿ ಅಥವಾ ಪತ್ರಿಕೆಗಳಲ್ಲಿ ಪ್ರಕಟಿಸುವಂತೆ ಕೋರಿತ್ತು.
ಸಂಬಂಧಿತ ಮಾಹಿತಿ ಹುಡುಕಿ