ಡಾಲರ್ ಎದುರಿಗೆ ಏಷ್ಯಾ ಕರೆನ್ಸಿಗಳ ದುರ್ಬಲ ವಹಿವಾಟಿನಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 7 ಪೈಸೆ ಕುಸಿತವಾಗಿ 45.59 ಡಾಲರ್‌ಗಳಿಗೆ ತಲುಪಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ, ಡಾಲರ್ ಎದುರಿಗೆ ರೂಪಾಯಿ 18 ಪೈಸೆ ಏರಿಕೆ ಕಂಡು 45.52/53 ರೂಪಾಯಿಗಳಿಗೆ ತಲುಪಿತ್ತು.
ಡಾಲರ್ ಎದುರಿಗೆ ಏಷ್ಯಾ ಕರೆನ್ಸಿಗಳ ದುರ್ಬಲ ವಹಿವಾಟು ಮತ್ತು ಅಮುದು ವಹಿವಾಟುದಾರರು ಹಾಗೂ ಬ್ಯಾಂಕ್‌ಗಳಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 286 ಪಾಯಿಂಟ್‌ಗಳ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.