ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಉ.ಪ್ರದೇಶದಲ್ಲಿ ನಾಲ್ಕು ವಿದ್ಯುತ್ ಘಟಕಗಳ ಸ್ಥಾಪನೆಗೆ ಅಸ್ತು (Electricity generation | Uttar Pradesh | Thermal power | ETF)
Bookmark and Share Feedback Print
 
ಉತ್ತರಪ್ರದೇಶದಲ್ಲಿ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಲು, ಖಾಸಗಿ ಸಹಭಾಗಿತ್ವದಲ್ಲಿ ನಾಲ್ಕು ಥರ್ಮಲ್ ವಿದ್ಯುತ್ ಘಟಕಗಳನ್ನು ಸ್ಥಾಪಿಸಲು ಸರಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಎನರ್ಜಿ ಟಾಸ್ಕ್ ಫೋರ್ಸ್, ಮುಖ್ಯ ಕಾರ್ಯದರ್ಶಿ ಅತುಲ್ ಕುಮಾರ್ ಅವರೊಂದಿಗೆ ನಡೆಸಿದ ಸಭೆಯಲ್ಲಿ 3480 ವಿದ್ಯುತ್ ಘಟಕಗಳನ್ನು ಸ್ಥಾಪಿಸುವ ಪ್ರಸ್ತಾವನೆಗೆ ಮಂಜೂರಾತಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಿತ್ರಾಕೋಟ್ ಜಿಲ್ಲೆಯ ಬರ್ಗಾರಾ ಪ್ರದೇಶಧಲ್ಲಿ ಬಜಾಜ್ ಹಿಂದೂಸ್ತಾನ್ ಕಂಪೆನಿ, 1980 ಮೆಗಾ ವ್ಯಾಟ್‌ ವಿದ್ಯುತ್ ಘಟಕಕ್ಕೆ ಅನುಮತಿ ನೀಡಲಾಗಿದೆ.ವಿದ್ಯುತ್ ಉತ್ಪಾದನೆಯನ್ನು ಸಂಪೂರ್ಣವಾಗಿ ರಾಜ್ಯಕ್ಕೆ ಬಳಸಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಅದರಂತೆ, 250 ಮೆಗಾವ್ಯಾಟ್‌‌ನ ಎರಡು ವಿದ್ಯುತ್ ಘಟಕಗಳನ್ನು ಫಾರುಕಾಬಾದ್ ಮತ್ತು ಔರಿಯಾ ಜಿಲ್ಲೆಗಳಲ್ಲಿ ಸ್ಥಾಪಿಸಲಾಗುತ್ತದೆ ಎಂದು ಮುಖ್ಯ ಕಾರ್ಯದರ್ಶಿ ಅತುಲ್ ಕುಮಾರ್ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ