ವಿದೇಶಿ ಮಾರುಕಟ್ಟೆಗಳಲ್ಲಿ ಉತ್ತಮ ದರವನ್ನು ಪಡೆಯಲು ರೈತರು ಹತ್ತಿ ಉತ್ಪಾದನೆಯನ್ನು ಹೆಚ್ಚಿಸುವ ಅಗತ್ಯತೆಯಿದೆ ಎಂದು ಕೇಂದ್ರ ಕೃಷಿ ಖಾತೆ ಸಚಿವ ಶರದ್ ಪವಾರ್ ಹೇಳಿದ್ದಾರೆ.
ಪ್ರಸಕ್ತ ವರ್ಷದ ಅವಧಿಯಲ್ಲಿ ಉತ್ತಮ ಮಳೆಯಾಗಿದ್ದರಿಂದ ಹತ್ತಿ ಉತ್ಪಾದನೆಯಲ್ಲಿ ಹೆಚ್ಚಳವಾಗಿದೆ. ರೈತರು ಹತ್ತಿ ಉತ್ಪಾದನೆಯನ್ನು ಮತ್ತಷ್ಟು ಹೆಚ್ಚಳಗೊಳಿಸಿದಲ್ಲಿ ಹೆಚ್ಚಿನ ದರವನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ.
ಮಹಾರಾಷ್ಟ್ರದ ಸ್ಟೇಟ್ ಕೋ-ಅಪರೇಟಿವ್ ಕಾಟನ್ ಗ್ರೋವರ್ಸ್ ಮಾರ್ಕೆಟಿಂಗ್ ಫೆಡರೇಶನ್ ಆಯೋಜಿಸಿದ ಬೆಳ್ಳಿ ಮಹೋತ್ಸವ ಸಮಾರಂಭದಲ್ಲಿ ಪವಾರ್ ರೈತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಹತ್ತಿ ಉತ್ಪಾದನೆಯನ್ನು ಹೆಚ್ಚಿಸಲು ರೈತರಿಗೆ ಅಗತ್ಯವಾದ ನೆರವು ನೀಡಲು ಕೇಂದ್ರ ಸರಕಾರ ಬದ್ಧವಾಗಿದೆ ಎಂದು ಕೃಷಿ ಸಚಿವ ಶರದ್ ಪವಾರ್ ತಿಳಿಸಿದ್ದಾರೆ.