ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್‌ಆರ್. ನಾಯರ್, 200 ಕೋಟಿ ರೂಪಾಯಿ ಯೋಜನೆ ಮಂಜೂರಾತಿಗೆ 45 ಲಕ್ಷ ರೂಪಾಯಿಗಳ ಲಂಚವನ್ನು ಪಡೆದಿದ್ದಾರೆ ಎಂದು ಸಿಬಿಐ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ.
ಲಂಚದ ಹಗರಣದಲ್ಲಿ ಭಾಗಿಯಾದ ಎಂಟು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ಸಿಬಿಐ ಅಧಿಕಾರಿಗಳು, ಕಟ್ಟಡ ನಿರ್ಮಾಣಗಾರರಿಂದ ಲಂಚವನ್ನು ಪಡೆದು, ಸಾಲವನ್ನು ನೀಡುತ್ತಿದ್ದರು ಎಂದು ಸಿಬಿಐ ಆರೋಪಿಸಿದೆ.
ತನಿಖೆಯನ್ನು ಪೂರ್ಣಗೊಳಿಸಲು ಆರೋಪಿಗಳನ್ನು ಮತ್ತೆ ಎಂಟು ದಿನಗಳ ಅವಧಿಗೆ ನ್ಯಾಯಾಂಗ ಬಂಧನಕ್ಕೆ ನೀಡಬೇಕು ಎಂದು ಸಿಬಿಐ, ನ್ಯಾಯಾಲಯಕ್ಕೆ ಮನವಿ ಮಾಡಲು ನಿರ್ಧರಿಸಿದೆ.
ಕಳೆದ ವಾರ ಸಿಬಿಐ, ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್‌ಆರ್. ನಾಯರ್ ಸೇರಿದಂತೆ ಇತರ ಏಳು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ.