ದೇಶದ ದ್ವಿಚಕ್ರ ವಾಹನ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಟಿವಿಎಸ್ ಮೋಟಾರ್, ನವೆಂಬರ್ ತಿಂಗಳ ಅವಧಿಯಲ್ಲಿ ವಾಹನಗಳ ಮಾರಟದಲ್ಲಿ ಶೇ.29ರಷ್ಟು ಹೆಚ್ಚಳವಾಗಿದೆ ಎಂದು ಕಂಪೆನಿಯ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವರ್ಷದ ನವೆಂಬರ್ ತಿಂಗಳ ಅವಧಿಯಲ್ಲಿ 121,945 ವಾಹನಗಳನ್ನು ಮಾರಾಟ ಮಾಡಲಾಗಿತ್ತು. ಆದರೆ, ಪ್ರಸಕ್ತ ವರ್ಷದ ನವೆಂಬರ್ ತಿಂಗಳ ಅವಧಿಯಲ್ಲಿ 157.041 ವಾಹನಗಳನ್ನು ಮಾರಾಟ ಮಾಡಲಾಗಿದೆ.
ಕಳೆದ ತಿಂಗಳ ಅವಧಿಯಲ್ಲಿ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ.27ರಷ್ಟು ಏರಿಕೆಯಾಗಿ 153,882 ವಾಹನಗಳನ್ನು ಮಾರಾಟ ಮಾಡಲಾಗಿದೆ. ನವೆಂಬರ್ 2009ರ ಅವಧಿಯಲ್ಲಿ 120,844 ವಾಹನಗಳನ್ನು ಮಾರಾಟ ಮಾಡಲಾಗಿತ್ತು ಎಂದು ಕಂಪೆನಿ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.
ಸ್ಕೂಟರ್‌ಗಳ ಮಾರಾಟದಲ್ಲಿ ಕೂಡಾ ಶೇ.44ರಷ್ಟು ಹೆಚ್ಚಳವಾಗಿದ್ದು, 36,233 ವಾಹನಗಳನ್ನು ಮಾರಾಟ ಮಾಡಲಾಗಿದೆ. ನವೆಂಬರ್ 2009ರ ಅವಧಿಯಲ್ಲಿ 25,115 ವಾಹನಗಳನ್ನು ಮಾರಾಟ ಮಾಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಮೋಟಾರ್‌ಸೈಕಲ್‌ಗಳ ಮಾರಾಟ ನವೆಂಬರ್ ತಿಂಗಳ ಅವಧಿಯಲ್ಲಿ ಶೇ.40 ರಷ್ಟು ಏರಿಕೆಯಾಗಿ 62,995 ವಾಹನಗಳನ್ನು ಮಾರಾಟ ಮಾಡಲಾಗಿದೆ. ನವೆಂಬರ್ 2009ರ ಅವಧಿಯಲ್ಲಿ 45,080 ವಾಹನಗಳನ್ನು ಮಾರಾಟ ಮಾಡಲಾಗಿದೆ.
ಪ್ರಸಕ್ತ ನವೆಂಬರ್ ತಿಂಗಳ ಅವಧಿಯ ರಫ್ತು ವಹಿವಾಟಿನಲ್ಲಿ 14,341 ವಾಹನಗಳನ್ನು ಮಾರಾಟ ಮಾಡಲಾಗಿದೆ. ಕಳೆದ ವರ್ಷದ ನವೆಂಬರ್ ತಿಂಗಳಲ್ಲಿ 14,008 ವಾಹನಗಳನ್ನು ಮಾರಾಟ ಮಾಡಲಾಗಿತ್ತು.