ಏಷ್ಯಾದ ಮಾರುಕಟ್ಟೆಗಳ ಚೇತರಿಕೆಯಿಂದಾಗಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 14 ಪೈಸೆ ಏರಿಕೆಯಾಗಿ 45.24 ರೂಪಾಯಿಗಳಿಗೆ ತಲುಪಿದೆ.
ಏಷ್ಯಾದ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಕುಸಿತದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದ ಚೇತರಿಕೆಯಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ಅಭಿಪ್ರಾಯಪಟ್ಟಿದ್ದಾರೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 50 ಪೈಸೆ ಏರಿಕೆ ಕಂಡು 45.38/39 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 14 ಪೈಸೆ ಏರಿಕೆಯಾಗಿ 45.24 ರೂಪಾಯಿಗಳಿಗೆ ತಲುಪಿದೆ.
ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 234.25 ಪಾಯಿಂಟ್‌ಗಳ ಚೇತರಿಕೆ ಕಂಡು 20,084.25 ಅಂಕಗಳಿಗೆ ತಲುಪಿದೆ.