ದೇಶದ ದ್ವಿಚಕ್ರ ವಾಹನ ತಯಾರಿಕೆಯಲ್ಲಿ ಎರಡನೇ ಸ್ಥಾನದಲ್ಲಿರುವ ಬಜಾಜ್ ಅಟೋ, ನವೆಂಬರ್ ತಿಂಗಳ ಅವಧಿಯ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ.19 ರಷ್ಟು ಏರಿಕೆ ಕಂಡು 2,65,036 ವಾಹನಗಳನ್ನು ಮಾರಾಟ ಮಾಡಲಾಗಿದೆ ಎಂದು ಕಂಪೆನಿಯ ಮೂಲಗಳು ತಿಳಿಸಿವೆ.
ಕಳೆದ ವರ್ಷದ ನವೆಂಬರ್ ತಿಂಗಳ ಅವಧಿಯಲ್ಲಿ 2,42,390 ವಾಹನಗಳನ್ನು ಮಾರಾಟ ಮಾಡಲಾಗಿತ್ತು ಎಂದು ಬಜಾಜ್ ಅಟೋ ಲಿಮಿಟೆಡ್ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.
ಕಳೆದ ಅಕ್ಟೋಬರ್ ತಿಂಗಳ ಅವಧಿಯ ವಾಹನಗಳ ಮಾರಾಟದಲ್ಲಿ ದಾಖಲೆಯಾಗಿದ್ದು, 3,29,776 ವಾಹನಗಳನ್ನು ಮಾರಾಟ ಮಾಡಲಾಗಿದೆ.
ಕಂಪೆನಿಯ ರಫ್ತು ವಹಿವಾಟಿನಲ್ಲಿ ಶೇ.8 ರಷ್ಟು ಕುಸಿತವಾಗಿದ್ದು, ನವೆಂಬರ್ ತಿಂಗಳ ಅವಧಿಯಲ್ಲಿ 90,869 ವಾಹನಗಳನ್ನು ಮಾರಾಟ ಮಾಡಲಾಗಿದೆ. ಕಳೆದ ವರ್ಷದ ನವೆಂಬರ್ ತಿಂಗಳ ರಫ್ತು ವಹಿವಾಟಿನಲ್ಲಿ 98,521 ವಾಹನಗಳನ್ನು ಮಾರಾಟ ಮಾಡಲಾಗಿದೆ ಎಂದು ಕಂಪೆನಿ ತಿಳಿಸಿದೆ.