ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಬಲವರ್ಧನೆ (Interbank Foreign Exchange | Indian rupee | Dollar)
Bookmark and Share Feedback Print
 
ರಫ್ತು ವಹಿವಾಟುದಾರರು ಡಾಲರ್ ಮಾರಾಟದಲ್ಲಿ ತೊಡಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 13 ಪೈಸೆ ಏರಿಕೆ ಕಂಡು 45.15 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 10 ಪೈಸೆ ಏರಿಕೆ ಕಂಡು 45.28/29 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 13 ಪೈಸೆ ಏರಿಕೆ ಕಂಡು 45.15 ರೂಪಾಯಿಗಳಿಗೆ ತಲುಪಿದೆ.

ರಫ್ತು ವಹಿವಾಟುದಾರರು ಡಾಲರ್‌ಗಳ ಮಾರಾಟದಲ್ಲಿ ತೊಡಗಿದ್ದರಿಂದ,ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 40.27 ಪಾಯಿಂಟ್‌ಗಳ ಕುಸಿತ ಕಂಡು 20,040.57 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ