ಆಧಾರ' ಕಾರ್ಡ್ ತಯಾರಿಕೆಗೆ ಪ್ರತಿಯೊಂದಕ್ಕೆ 100 ರೂಪಾಯಿ ವೆಚ್ಚವಾಗಲಿದೆ ಎಂದು ಯುನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾದ ಮುಖ್ಯಸ್ಥ ನಂದನ್ ನಿಲೇಕಣಿ ಹೇಳಿದ್ದಾರೆ.
ಆಧಾರ ಸಂಖ್ಯೆಯ ಕಾರ್ಡ್‌ನಿಂದಾಗಿ ಸರಕಾರದ ಸಾರ್ವಜನಿಕ ವೆಚ್ಚ ಹೆಚ್ಚಳಕ್ಕೆ ಕಾರಣವಾಗುತ್ತಿದ್ದು, ಜನತೆಗೆ ಸರಕಾರ ನೂತನ ಸೇವೆಗಳನ್ನು ನೀಡಲು ಸಾಧ್ಯವಾಗುತ್ತದೆ. ನಾಗರಿಕರ ಗುರುತಿನ ಕಾರ್ಡ್ ತಯಾರಿಸಲು ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಲಾಗಿದ್ದು, ನಕಲಿ ಕಾರ್ಡ್‌ಗಳನ್ನು ಸೃಷ್ಟಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಆಧಾರ ಸಂಖ್ಯೆಯ ಕಾರ್ಡ್‌ನಿಂದ, ಬ್ಯಾಂಕ್ ಖಾತೆ ಅಥವಾ ಮೊಬೈಲ್ ಸಿಮ್ ಕಾರ್ಡ್‌ಗಳನ್ನು ಪಡೆಯಬಹುದಾಗಿದೆ. ಮುಂದಿನ ದಿನಗಳಲ್ಲಿ ಸರಕಾರದಿಂದ ಹಲವು ಪ್ರಯೋಜನಗಳನ್ನು ಪಡೆಯಬಹುದಾಗಿದೆ ಎಂದು ವಿವರಣೆ ನೀಡಿದ್ದಾರೆ.
ದೇಶದ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವಲಸೆ ಹೋಗುವ ಜನರಿಗೆ, ಆಧಾರ ಸಂಖ್ಯೆಯ ಕಾರ್ಡ್ ಉಪಯುಕ್ತವಾಗಿದೆ ಎಂದು ಯುನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾದ ಮುಖ್ಯಸ್ಥ ನಂದನ್ ನಿಲೇಕಣಿ ಹೇಳಿದ್ದಾರೆ.