ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯ ಮುಖ್ಯಸ್ಥ ಸ್ಥಾನಕ್ಕೆ ತಾವು ಅಭ್ಯರ್ಥಿಯಲ್ಲ ಎಂದು ಕೇಂದ್ರ ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ಹೇಳಿದ್ದಾರೆ.
ಇಂತಹ ವರದಿಗಳು ಸತ್ಯಾಂಶಕ್ಕೆ ದೂರವಾಗಿದ್ದು, ಉಹಾಪೋಹದ ವರದಿಗಳಾಗಿವೆ. ಐಎಂಎಫ್ ಅಧ್ಯಕ್ಷ ಸ್ಥಾನಕ್ಕೆ ತಾವು ಸ್ಪರ್ಧಿಯಲ್ಲ ಎಂದು ನ್ಯೂಯಾರ್ಕ್ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ ಅಹ್ಲುವಾಲಿಯಾ ತಿಳಿಸಿದ್ದಾರೆ.
ಜವಾಹರಲಾಲ್ ನೆಹರು ಅರ್ಬನ್ ರಿನ್ಯೂವಲ್ ಮಿಶನ್, ಐದು ವರ್ಷಗಳು ಪೂರ್ತಿಗೊಳಿಸಿದ ಹಿನ್ನೆಲೆಯಲ್ಲಿ,ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮೊಂಟೆಕ್ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಐಎಂಎಫ್ ವ್ಯವಸ್ಥಾಪಕ ನಿರ್ದೇಶಕರಾದ ಡೊಮಿನಿಕ್ ಸ್ಟ್ರಾಸ್ ಖಾನ್, ಐಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಅಮೆರಿಕ, ಯುರೋಪ್ ಹೊರತುಪಡಿಸಿ, ಇತರ ರಾಷ್ಟ್ರಗಳ ಮೂಲದವರು ಆಯ್ಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಉಹಾಪೋಹಗಳು ಹರಡಿವೆ ಎಂದು ಅಹ್ಲುವಾಲಿಯಾ ತಿಳಿಸಿದ್ದಾರೆ.