ದೇಶದ ಇತರ ಬ್ಯಾಂಕ್‌ಗಳು ಠೇವಣಿ ದರಗಳಲ್ಲಿ ಏರಿಕೆ ಘೋಷಿಸಿದ್ದರಿಂದ, ಇದೀಗ ಸಿಂಡಿಕೇಟ್ ಬ್ಯಾಂಕ್ ಒಂದು ಕೋಟಿ ರೂಪಾಯಿಗಿಂತ ಹೆಚ್ಚಿನ ಠೇವಣಿಗೆ ಶೇ.8.5ರಷ್ಟು ಬಡ್ಡಿ ದರ ಏರಿಕೆಯನ್ನು ಘೋಷಿಸಿದೆ.
ಒಂದು ಕೋಟಿ ರೂಪಾಯಿ ಸ್ಥಿರ ಠೇವಣಿಯ 3-5 ವರ್ಷಗಳವರೆಗಿನ ಅವಧಿಗೆ ಶೇ.8.5ರಷ್ಟು ಬಡ್ಡಿ ದರವನ್ನು ನೀಡಲಾಗುವುದು ಎಂದು ಸಿಂಡಿಕೇಟ್ ಬ್ಯಾಂಕ್ ಮುಂಬೈ ಶೇರುಪೇಟೆಗೆ ಸಲ್ಲಿಸಿದ ಮಾಹಿತಿಯಲ್ಲಿ ಬಹಿರಂಗಪಡಿಸಿದೆ.
ಈಗಾಗಲೇ ಪಂಜಾಬ್ ನ್ಯಾಷನಲ್ ಬ್ಯಾಂಕ್, ಅಲಹಾಬಾದ್ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಬಿಕನೇರ್ ಬ್ಯಾಂಕ್‌ಗಳು ಬಡ್ಡಿ ದರಗಳಲ್ಲಿ ಏರಿಕೆ ಘೋಷಿಸಿವೆ.