ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಎಚ್‌ಡಿಎಫ್‌ಸಿಯಿಂದ ಶೇ.0.75ರಷ್ಟು ಬಡ್ಡಿ ದರ ಹೆಚ್ಚಳ (HDFC | Lending rate | Raise | RPLR)
Bookmark and Share Feedback Print
 
PTI
ಗೃಹ ಸಾಲ ವಿತರಣಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಎಚ್‌ಡಿಎಫ್‌ಸಿ ಬ್ಯಾಂಕ್, ಸಾಲದ ಮೇಲಿನ ಬಡ್ಡಿ ದರದಲ್ಲಿ ಶೇ.0.75ರಷ್ಟು ಬಡ್ಡಿ ದರ ಹೆಚ್ಚಳ ಘೋಷಿದೆ.

ಎಚ್‌ಡಿಎಫ್‌ಸಿ ಬ್ಯಾಂಕ್, ರಿಟೇಲ್ ಪ್ರೈಮ್ ಲೆಂಡಿಂಗ್ ದರವನ್ನು ಶೇ.0.75ರಷ್ಟು ಹೆಚ್ಚಳಗೊಳಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಅನ್ವಯವಾಗಲಿದೆ ಎಂದು ಬ್ಯಾಂಕ್ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.

ಬಡ್ಡಿ ದರ ಹೆಚ್ಚಳದಿಂದಾಗಿ, ಸಾಲದ ಮೇಲಿನ ಬಡ್ಡಿ ದರ ಶೇ.14.25ರಿಂದ ಶೇ.15ಕ್ಕೆ ಏರಿಕೆಯಾಗಿದೆ.

ಹಣದುಬ್ಬರ ದರ ಏರಿಕೆ ಹಾಗೂ ಮಾರುಕಟ್ಟೆಗಳಲ್ಲಿನ ನಗದು ಹರಿವಿನ ಪ್ರಮಾಣದಲ್ಲಿ ಕುಸಿತವಾಗಿದ್ದರಿಂದ, ಬಡ್ಡಿ ದರ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.

ನೂತನ ಗ್ರಾಹಕರಿಗೆ 30 ಲಕ್ಷದವರೆಗಿನ ಗೃಹ ಸಾಲಕ್ಕೆ ಶೇ.9.5ರಷ್ಟು ಬಡ್ಡಿ ದರವನ್ನು ವಿಧಿಸಲಾಗುವುದು. 75 ಲಕ್ಷದವರೆಗಿನ ಗೃಹ ಸಾಲಕ್ಕೆ ಶೇ.9.75ರಷ್ಟು ಬಡ್ಡಿಯನ್ನು ನಿಗದಿಪಡಿಸಲಾಗಿದೆ ಎಂದು ಬ್ಯಾಂಕ್‌ನ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ