ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಉ.ಪ್ರದೇಶ ಸರಕಾರದಿಂದ ಟಿಸಿಎಸ್‌ಗೆ ಐಟಿ ಗುತ್ತಿಗೆ (TCS | IT project | Uttar Pradesh govt | Bombay Stock Exchange)
Bookmark and Share Feedback Print
 
ದೇಶದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಟಾಟಾ ಕನ್ಸಲ್‌ಟನ್ಸಿ ಸರ್ವಿಸಸ್, ಉತ್ತರ ಪ್ರದೇಶ ಸರಕಾರದಿಂದ ಸಾಫ್ಟ್‌ವೇರ್ ಪ್ರೊಜೆಕ್ಟ್‌ ಗುತ್ತಿಗೆಯನ್ನು ಪಡೆದಿದೆ ಎಂದು ಮೂಲಗಳು ತಿಳಿಸಿವೆ.

ಮೂಲಸೌಕರ್ಯ ಕ್ಷೇತ್ರಗಳಿಗೆ ಅಗತ್ಯವಾದ ಡಟಾ ಸೆಂಟರ್‌ಗಳ ಸ್ಥಾಪನೆಗೆ ಅಗತ್ಯವಾದ ಸಾಫ್ಟ್‌ವೇರ್ ಅಭಿವೃದ್ಧಿಗಾಗಿ ಟಿಸಿಎಸ್ ಕಂಪೆನಿಗೆ ಗುತ್ತಿಗೆಯನ್ನು ನೀಡಲಾಗಿದೆ ಎಂದು ಮುಂಬೈ ಶೇರುಪೇಟೆಗೆ ಸಲ್ಲಿಸಿದ ವರದಿಯಲ್ಲಿ ಬಹಿರಂಗಪಡಿಸಿದೆ.

ಟಾಟಾ ಕನ್ಸಲ್‌ಟನ್ಸಿ ಸರ್ವಿಸಸ್, ಗುತ್ತಿಗೆಯ ಮೊತ್ತವನ್ನು ಬಹಿರಂಗಪಡಿಸಲು ನಿರಾಕರಿಸಿದೆ ಎಂದು ಮೂಲಗಳು ತಿಳಿಸಿವೆ.

ಟಿಸಿಎಸ್ ಕಂಪೆನಿ ಉತ್ತರ ಪ್ರದೇಶ ಸರಕಾರದ ಗುತ್ತಿಗೆ ಪಡೆದ ವರದಿಗಳು ಬಹಿರಂಗವಾಗುತ್ತಿದ್ದಂತೆ, ಶೇರುಪೇಟೆಯಲ್ಲಿ ಶೇರುದರಗಳಲ್ಲಿ ಶೇ.2ರಷ್ಟು ಏರಿಕೆಯಾಗಿ ತಲಾ ಶೇರು ದರ 1,112ರೂಪಾಯಿಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ