ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಬಲವರ್ಧನೆ (Rupee | Dollar | Asian currencies | Forex)
Bookmark and Share Feedback Print
 
ಏಷ್ಯಾದ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಕುಸಿತದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 15 ಪೈಸೆ ಏರಿಕೆಯಾಗಿ 44.95 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 18 ಪೈಸೆ ಏರಿಕೆ ಕಂಡು 45.10/11 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 15 ಪೈಸೆ ಏರಿಕೆಯಾಗಿ 44.95 ರೂಪಾಯಿಗಳಿಗೆ ತಲುಪಿದೆ.

ಏಷ್ಯಾದ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಕುಸಿತದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಏರಿಕೆಯಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 135 ಪಾಯಿಂಟ್‌ಗಳ ಏರಿಕೆ ಕಂಡು 20,101.93 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ