ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಚೇತರಿಕೆ (Rupee | US dollar | Sensex | Asian currencies)
Bookmark and Share Feedback Print
 
ಸತತ ಆರನೇ ದಿನವೂ ಚೇತರಿಕೆ ಕಂಡ ಫಾರೆಕ್ಸ್ ಮಾರುಕಟ್ಟೆ , ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ 10 ಪೈಸೆ ಏರಿಕೆಯಾಗಿ 44.84 ರೂಪಾಯಿಗಳಿಗೆ ತಲುಪಿದೆ.

ರಫ್ತು ವಹಿವಾಟುದಾರರಿಂದ ಹಾಗೂ ಬ್ಯಾಂಕ್‌ಗಳಿಂದ ಡಾಲರ್ ಮಾರಾಟದಲ್ಲಿ ಹೆಚ್ಚಳವಾಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ 16 ಪೈಸೆ ಏರಿಕೆ ಕಂಡು 44.94/95 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ ಡಾಲರ್ ಎದುರಿಗೆ ರೂಪಾಯಿ 10 ಪೈಸೆ ಏರಿಕೆಯಾಗಿ 44.84 ರೂಪಾಯಿಗಳಿಗೆ ತಲುಪಿದೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 46.68 ಪಾಯಿಂಟ್‌ಗಳ ಚೇತರಿಕೆ ಕಂಡು 19,934.63 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ