ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ (Silver | Rupee | Dollar)
Bookmark and Share Feedback Print
 
ವಿದೇಶಿ ವಿನಿಮಯ ಮಾರುಕಟ್ಟೆಯ ಇಂದಿನ ಆರಂಭಿಕ ವಹಿವಾಟಿನಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯ 35 ಪೈಸೆ ಕುಸಿತ ಕಂಡು 44.99 ರೂಪಾಯಿಗಳಿಗೆ ತಲುಪಿದೆ.

ಕಳೆದ ಎಂಟು ದಿನಗಳ ವಹಿವಾಟಿನಲ್ಲಿ ಡಾಲರ್ ಎದುರಿಗೆ ಚೇತರಿಕೆ ಕಂಡ ರೂಪಾಯಿ ಮೌಲ್ಯ,ಅಮುದು ವಹಿವಾಟುದಾರರು ಹಾಗೂ ಬ್ಯಾಂಕ್‌ಗಳಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ ರೂಪಾಯಿ 30 ಪೈಸೆ ಏರಿಕೆ ಕಂಡು ಅಂತ್ಯವಾಗಿತ್ತು. ಆದರೆ, ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯ 35 ಪೈಸೆ ಕುಸಿತ ಕಂಡು 44.99 ರೂಪಾಯಿಗಳಿಗೆ ತಲುಪಿದೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂಮದಿನ ಆರಂಭಿಕ ವಹಿವಾಟಿನಲ್ಲಿ 154.38 ಪಾಯಿಂಟ್‌ಗಳ ಏರಿಕೆ ಕಂಡು 19,780.26 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಬೆಳ್ಳಿ, ರೂಪಾಯಿ, ಡಾಲರ್