ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » 2011ರಲ್ಲಿ ಬ್ಯಾಂಕ್‌ಗಳಿಂದ ಸಾಮಾನ್ಯ ಪ್ರವೇಶ ಪರೀಕ್ಷೆ (Public sector banks | Common all-India entrance test | Banks | Candidates)
ಬ್ಯಾಂಕ್‌ಗಳಿಗೆ ಉದ್ಯೋಗಿಗಳಾಗಿ ಸೇರ್ಪಡೆಯಾಗಲು ಬಯಸುವವರಿಗೆ ಸಂತಸದ ಸುದ್ದಿಯೊಂದು ಬಂದಿದೆ.
ಬ್ಯಾಂಕ್‌ಗಳಿಗೆ ಸೇರ್ಪಡೆಯಾಗಲು ಬಯಸುವ ಆಕಾಂಕ್ಷಿಗಳು, ದೇಶಾದ್ಯಂತ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಎದುರಿಸಬೇಕಾಗಿದ್ದು, ಈ ಹಿಂದಿನಂತೆ ನೇಮಕಾತಿ ವಿಳಂಬತೆ ಸೇರಿದಂತೆ ಇತರ ಬಿಕ್ಕಟ್ಟುಗಳು ಅಂತ್ಯವಾದಂತಾಗಿದೆ.
ಪ್ರಸ್ತುತ ಬ್ಯಾಂಕ್‌ಗಳಲ್ಲಿ ಉದ್ಯೋಗಿಗಳಾಗ ಬಯಸುವ ಅಭ್ಯರ್ಥಿಗಳು ನೇಮಕಾತಿ ಪ್ರಕ್ರಿಯೆ ಅಂತ್ಯಗೊಳ್ಳಲು ಸುಮಾರು ಒಂದು ವರ್ಷದ ಅವಧಿಯವರೆಗೆ ಕಾಯಬೇಕಾಗುತ್ತಿತ್ತು. ಇದರಿಂದಾಗಿ ಅಭ್ಯರ್ಥಿಗಳು ಫಲಿತಾಂಶ ಪ್ರಕಟವಾಗುವವರೆಗೆ ಮಾನಸಿಕ ನೋವನ್ನು ಅನುಭವಿಸಬೇಕಾಗುತ್ತಿತ್ತು.
ಇದೀಗ ದೇಶಾದ್ಯಂತ ಏಕಕಾಲಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ಆಯೋಜಿಸುತ್ತಿರುವುದರಿಂದ, ನಿಗದಿತ ಅವಧಿಗೆ ಫಲಿತಾಂಶ ಪ್ರಕಟಣೆಯಾಗಲಿದೆ ಎಂದು ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಶನ್ ಮುಖ್ಯ ಕಾರ್ಯನಿರ್ವಾಹಕ ಕೆ.ರಾಮಕೃಷ್ಣನ್ ಹೇಳಿದ್ದಾರೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರೂಪ್, ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಭಾಗಿಯಾಗುವುದಿಲ್ಲ. ತನ್ನದೇ ಆದ ನೇಮಕಾತಿ ಪ್ರಕ್ರಿಯೆಯನ್ನು ನಡೆಸುತ್ತದೆ ಎಂದು ತಿಳಿಸಿದ್ದಾರೆ.