ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಚಿನ್ನದ ದರ:ಪ್ರತಿ 10 ಗ್ರಾಂಗೆ 20,750 ರೂಪಾಯಿಗಳು (Gold prices | Asian trend | Silver | Asian markets)
Bookmark and Share Feedback Print
 
PTI
ಏಷ್ಯಾ ಮಾರುಕಟ್ಟೆಗಳ ಸ್ಥಿರ ವಹಿವಾಟಿನ ಹಿನ್ನೆಲೆಯಲ್ಲಿ ಚಿನ್ನದ ದರ ಚೇತರಿಸಿಕೊಂಡಿದ್ದು, ಪ್ರತಿ 10 ಗ್ರಾಂಗೆ 30 ರೂಪಾಯಿಗಳ ಏರಿಕೆಯಾಗಿ 20,750 ರೂಪಾಯಿಗಳಿಗೆ ತಲುಪಿದೆ.

ಏತನ್ಮಧ್ಯೆ, ಕೈಗಾರಿಕೆ ಕ್ಷೇತ್ರದ ಬೇಡಿಕೆಯಲ್ಲಿ ಕುಸಿತವಾಗಿದ್ದರಿಂದ, ಬೆಳ್ಳಿಯ ದರ ಪ್ರತಿ ಕೆಜಿಗೆ 200 ರೂಪಾಯಿಗಳ ಇಳಿಕೆಯಾಗಿ 44,000 ರೂಪಾಯಿಗಳಿಗೆ ತಲುಪಿದೆ.

ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯದ ಕುಸಿತದಿಂದಾಗಿ, ಚಿನ್ನದ ಬೇಡಿಕೆಯಲ್ಲಿ ಹೆಚ್ಚಳವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಸಾಗರೋತ್ತರ ಮಾರುಕಟ್ಟೆಗಳಲ್ಲಿ ಚಿನ್ನದ ದರ ಪ್ರತಿ ಔನ್ಸ್‌ಗೆ ಶೇ.0.5ರಷ್ಟು ಏರಿಕೆ ಕಂಡು 1,388.72 ಡಾಲರ್‌ಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ