ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » 3 ಬ್ಯಾಂಕ್‌ಗಳಿಂದ ಸಾಲ, ಠೇವಣಿ ಬಡ್ಡಿ ದರ ಹೆಚ್ಚಳ ಘೋಷಣೆ (Punjab National Bank | Bank of Baroda | HDFC Bank | Lending | Deposit rates)
ದೇಶದ ಪ್ರಮುಖ ಬ್ಯಾಂಕ್‌ಗಳಾದ ಪಂಜಾಬ್ ನ್ಯಾಷನಲ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್, ಸಾಲದ ಮೇಲಿನ ಬಡ್ಡಿ ದರ ಹಾಗೂ ಠೇವಣಿ ಬಡ್ಡಿ ದರದಲ್ಲಿ ಶೇ.0.75ರಷ್ಟು ಬಡ್ಡಿ ದರ ಹೆಚ್ಚಳವನ್ನು ಘೋಷಿಸಿವೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್, ಸಾಲದ ಮೇಲಿನ ಬಡ್ಡಿ ದರವನ್ನು ಶೇ.8.5ರಿಂದ ಶೇ.9ಕ್ಕೆ ಏರಿಕೆಗೊಳಿಸಿದ್ದು, ಡಿಸೆಂಬರ್ 13ರಿಂದ ಜಾರಿಗೆ ಬರಲಿದೆ ಎಂದು ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿವೆ.
ಪಂಜಾಬ್ ಬ್ಯಾಂಕ್ ಬಡ್ಡಿ ದರ ಹೆಚ್ಚಳಗೊಳಿಸಿದ್ದರಿಂದ ನೂತನ ಗ್ರಾಹಕರು ,ಕಾರ್ಪೋರೇಟ್, ಗೃಹ ಮತ್ತು ವಾಹನೋದ್ಯಮ ಸಾಲಗಲ ಮೇಲಿನ ಬಡ್ಡಿ ದರದಲ್ಲಿ ಶೇ.0.5ರಷ್ಟು ಹೆಚ್ಚಳವನ್ನು ಭರಿಸಬೇಕಾಗಿದೆ.
ಏತನ್ಮಧ್ಯೆ, ಎಚ್‌ಡಿಎಫ್‌ಸಿ ಬ್ಯಾಂಕ್ ಠೇವಣಿ ಮತ್ತು ಸಾಲದ ಮೇಲಿನ ಬಡ್ಡಿ ದರದಲ್ಲಿ ಶೇ.0.75ರಷ್ಟು ಹೆಚ್ಚಳಗೊಳಿಸಿ ಆದೇಶ ಹೊರಡಿಸಿದೆ.
ಎಚ್‌ಡಿಎಫ್‌ಸಿ ಬ್ಯಾಂಕ್, ಪ್ರೈಮ್ ಲೆಂಡಿಂಗ್ ದರದಲ್ಲಿ 25 ಬೇಸಿಸ್ ಪಾಯಿಂಟ್‌ಗಳಷ್ಟು ಹೆಚ್ಚಳಗೊಳಿಸಿದ್ದು, ಇಂದಿನಿಂದ ಜಾರಿಗೆ ಬರಲಿದೆ ಎಂದು ಬ್ಯಾಂಕ್‌ನ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.
ಬ್ಯಾಂಕ್ ಆಫ್ ಬರೋಡಾ, ವಿವಿಧ ಸ್ಥಿರ ಠೇವಣಿ ಬಡ್ಡಿ ದರಗಳಲ್ಲಿ 25 ಬೇಸಿಸ್ ಪಾಯಿಂಟ್‌ಗಳಷ್ಟು ಹೆಚ್ಚಳಗೊಳಿಸಿ ಆದೇಶ ಹೊರಡಿಸಿದೆ.