ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್:ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ (Rupee | Dollar | Forex | Bombay stock exchange)
Bookmark and Share Feedback Print
 
ಆರ್ಥಿಕತೆ ಚೇತರಿಕೆ ಹಾಗೂ ಕೈಗಾರಿಕೋದ್ಯಮ ತ್ರೈಮಾಸಿಕ ಫಲಿತಾಂಶಗಳಿಂದಾಗಿ ಅಮೆರಿಕದ ಡಾಲರ್ ಏಷ್ಯಾದ ಇತರ ಕರೆನ್ಸಿಗಳ ಎದುರು ಚೇತರಿಕೆ ಕಂಡಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 11 ಪೈಸೆ ಕುಸಿತವಾಗಿ 45.20 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ 16 ಪೈಸೆ ಚೇತರಿಕೆ ಕಂಡು 45.05/06 ರೂಪಾಯಿಗಳಿಗೆ ತಲುಪಿತ್ತು.ಆದರೆ, ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 11 ಪೈಸೆ ಕುಸಿತವಾಗಿ 45.20 ರೂಪಾಯಿಗಳಿಗೆ ತಲುಪಿದೆ.

ಸಾಗರೋತ್ತರ ಮಾರುಕಟ್ಟೆಗಳಲ್ಲಿ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಚೇತರಿಕೆ ಹಾಗೂ ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳದಿಂದಾಗಿ ರೂಪಾಯಿ ಮೌಲ್ಯ ಕುಸಿಯಲು ಕಾರಣವಾಗಿದೆ.ಶೇರುಪೇಟೆಯ ಚೇತರಿಕೆಯ ವಹಿವಾಟಿನಿಂದಾಗಿ ರೂಪಾಯಿ ಮೌಲ್ಯದಲ್ಲಿ ಮತ್ತಷ್ಟು ಕುಸಿತವಾಗುವುದನ್ನು ತಡೆದಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 95.81ಪಾಯಿಂಟ್‌ಗಳ ಏರಿಕೆ ಕಂಡು 19,604.70 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ