ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಚೇತರಿಕೆಯ ಹಿನ್ನೆಲೆಯಲ್ಲಿ,ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 35 ಪೈಸೆ ಏರಿಕೆಯಾಗಿ 45.29 ರೂಪಾಯಿಗಳಿಗೆ ತಲುಪಿದೆ.
ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳ ಹಾಗೂ ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಚೇತರಿಕೆಯಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ 20 ಪೈಸೆ ಏರಿಕೆ ಕಂಡು 44.94/95 ರೂಪಾಯಿಗಳಿಗೆ ತಲುಪಿತ್ತು. ಆದರೆ, ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 35 ಪೈಸೆ ಏರಿಕೆಯಾಗಿ 45.29 ರೂಪಾಯಿಗಳಿಗೆ ತಲುಪಿದೆ.
ಏತನ್ಮಧ್ಯೆ, ಮುಂಬೈ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ಹಂತದಲ್ಲಿ ಲಾಭದಾಯಕ ವಹಿವಾಟಿನಿಂದಾಗಿ 76 ಪಾಯಿಂಟ್‌ಗಳ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.