ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದಲ್ಲಿ ಚೇತರಿಕೆಯಾಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 28 ಪೈಸೆ ಕುಸಿತವಾಗಿ 45.62 ರೂಪಾಯಿಗಳಿಗೆ ತಲುಪಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯ 6 ಪೈಸೆ ಏರಿಕೆ ಕಂಡು 45.34/35 ರೂಪಾಯಿಗಳಿಗೆ ತಲುಪಿತ್ತು. ಆದರೆ, ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 28 ಪೈಸೆ ಕುಸಿತವಾಗಿ 45.62 ರೂಪಾಯಿಗಳಿಗೆ ತಲುಪಿದೆ.
ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದಲ್ಲಿ ಚೇತರಿಕೆಯಾಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಇಳಿಕೆಯಾಗಿದೆ. ಭಾರತೀಯ ಶೇರುಪೇಟೆ ಕುಸಿತದಿಂದ ರೂಪಾಯಿ ಮೌಲ್ಯ ಮತ್ತಷ್ಟು ಕುಸಿಯಲು ಕಾರಣವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 99.99 ಪಾಯಿಂಟ್‌ಗಳ ಕುಸಿತ ಕಂಡು 19,764.86 ಅಂಕಗಳಿಗೆ ತಲುಪಿದೆ.