ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ನವದೆಹಲಿ : ಈರುಳ್ಳಿ ದರ ಪ್ರತಿ ಕೆಜಿಗೆ 70 ರೂಪಾಯಿ (Onion prices | Retail markets | Export)
Bookmark and Share Feedback Print
 
PTI
ರಾಜಧಾನಿಯ ಮಾರುಕಟ್ಟೆಗಳಲ್ಲಿ ಸರಬರಾಜು ಕೊರತೆಯಿಂದಾಗಿ ಈರುಳ್ಳಿ ದರ ಪ್ರತಿ ಕೆಜಿಗೆ 60-70 ರೂಪಾಯಿಗಳಿಗೆ ಏರಿಕೆಯಾಗಿದ್ದು, ಕೃಷಿ ಉತ್ಪನ್ನಗಳ ರಫ್ತು ನಿಯಮಗಳನ್ನು ಪರಿಷ್ಕರಿಸಲು ಸರಕಾರ ತುರ್ತುಸಭೆಯನ್ನು ಕರೆದಿದೆ ಎಂದು ಮೂಲಗಳು ತಿಳಿಸಿವೆ.

ದೇಶಾದ್ಯಂತ ಈರುಳ್ಳಿ ದರ ಈಗಾಗಲೇ 35-40 ರೂಪಾಯಿಗಳಿಗೆ ಏರಿಕೆಯಾಗಿದ್ದು, ರವಿವಾರದಂದು ನವದೆಹಲಿ ಹಾಗೂ ನೆರೆಯ ಜಿಲ್ಲೆಗಳಲ್ಲಿ ಪ್ರತಿ ಕೆಜಿಗೆ 60-70 ರೂಪಾಯಿಗಳಿಗೆ ಏರಿಕೆಯಾಗಿದೆ.

ಏಷ್ಯಾದ ಬೃಹತ್ ಹಣ್ಣು ಮತ್ತು ತರಕಾರಿ ಮಾರುಕಟ್ಟೆಯಾದ ಅಜಾದ್‌ಪುರ್ ಮಾರುಕಟ್ಟೆಯಲ್ಲಿ ಈರುಳ್ಳಿ ದರ, ಪ್ರತಿ ಕೆಜಿಗೆ 30-60 ರೂಪಾಯಿಗಳಿಗೆ ಏರಿಕೆಯಾಗಿದೆ ಎಂದು ವರ್ತಕರು ತಿಳಿಸಿದ್ದಾರೆ.

ಮಹಾರಾಷ್ಟ್ರ, ಗುಜರಾತ್ ಮತ್ತು ದಕ್ಷಿಣ ಭಾರತದ ರಾಜ್ಯಗಳಲ್ಲಿ ಅಕಾಲಿಕ ಮಳೆಯಿಂದಾಗಿ, ಈರುಳ್ಳಿ ಉತ್ಪಾದನೆಯಲ್ಲಿ ಕುಸಿತವಾಗಿದ್ದು, ಸರಬರಾಜಿನ ಕೊರತೆಯೂ ಅಡ್ಡಿಯಾಗಿದೆ ಎಂದು ವಹಿವಾಟಿನ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ